Deuteronomy 26:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟೆವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.
Kannada BSI Bible 2016
ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ಕೇಳಿ ನಮ್ಮ ದುರವಸ್ಥೆಯನ್ನೂ ಕಷ್ಟವನ್ನೂ ಉಪದ್ರವವನ್ನೂ ನೋಡಿ
Kannada Bible (KNCL) BSI 2016
ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.