Deuteronomy 27:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
Kannada BSI Bible 2016
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.
Kannada Bible (KNCL) BSI 2016
‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.