Deuteronomy 27:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
Kannada BSI Bible 2016
ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.
Kannada Bible (KNCL) BSI 2016
“ಅವರು, ‘ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.