Deuteronomy 27:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
Kannada BSI Bible 2016
ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿ ಸಹಭೋಜನಮಾಡಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.
Kannada Bible (KNCL) BSI 2016
ಅಲ್ಲಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿ ಸಹಭೋಜನ ಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.