Deuteronomy 27:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೋಶೆಯೂ ಯಾಜಕರೂ ಇಸ್ರೇಲ್ ಸಮೂಹದವರೊಂದಿಗೆ ಮಾತನಾಡಿದರು. ಆಗ ಮೋಶೆಯು, “ಇಸ್ರೇಲರೇ, ಮೌನವಾಗಿ ನನ್ನ ಮಾತುಗಳನ್ನು ಕೇಳಿರಿ. ಈ ದಿನ ನೀವು ದೇವರಾದ ಯೆಹೋವನ ಸ್ವಕೀಯ ಪ್ರಜೆಯಾಗಿರುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.
Kannada BSI Bible 2016
ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಾದ ಲೇವಿಯರೊಡನೆ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ - ಇಸ್ರಾಯೇಲ್ಯರೇ, ನಿಶಬ್ದವಾಗಿದ್ದು ಕೇಳಿರಿ. ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾದಿರಷ್ಟೆ.
Kannada Bible (KNCL) BSI 2016
ಯಾಜಕರಾದ ಲೇವಿಯರೊಡನೆ ಮೋಶೆ ಇಸ್ರಯೇಲರೆಲ್ಲರಿಗೆ, “ಇಸ್ರಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ: ನೀವು ಈಗ ನಿಮ್ಮ ದೇವರಾದ ಸರ್ವೇಶ್ವರನ ಜನರಾದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯೂ ಯಾಜಕರಾದ ಲೇವಿಯರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ, “ಇಸ್ರಾಯೇಲರೇ, ಶಾಂತರಾಗಿದ್ದು ಕೇಳಿರಿ. ನೀವು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಜನಾಂಗವಾಗಿದ್ದೀರಿ.