Deuteronomy 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.
Kannada BSI Bible 2016
ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು.
Kannada Bible (KNCL) BSI 2016
“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.