Deuteronomy 28:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.
Kannada BSI Bible 2016
ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.
Kannada Bible (KNCL) BSI 2016
ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.