Deuteronomy 28:14 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.
Kannada BSI Bible 2016
ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.