Deuteronomy 28:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
Kannada BSI Bible 2016
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
Kannada Bible (KNCL) BSI 2016
ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.