Deuteronomy 28:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
Kannada BSI Bible 2016
ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಿಮ್ಮನ್ನು ಕ್ಷಯರೋಗ ಚಳಿಜ್ವರ ಉರಿತ ಉಷ್ಣಜ್ವರಗಳಿಂದಲೂ ದೇಶವನ್ನು ಕ್ಷಾಮದಿಂದಲೂ ಬೆಳೆಯನ್ನು ಕಾಡಿಗೆ ಬಿಸಿಗಾಳಿಗಳಿಂದಲೂ ಬಾಧಿಸಲಾಗಿ ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ಹತ್ತುವವು.
Kannada Bible (KNCL) BSI 2016
ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.