Deuteronomy 28:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
Kannada BSI Bible 2016
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
Kannada Bible (KNCL) BSI 2016
ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.