Deuteronomy 28:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
Kannada BSI Bible 2016
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷೇತೋಟದ ಬೆಳೆಯು ನಿಮಗೆ ದೊರೆಯುವದಿಲ್ಲ.
Kannada Bible (KNCL) BSI 2016
“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.