Deuteronomy 28:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.
Kannada BSI Bible 2016
ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವದಿಲ್ಲ.
Kannada Bible (KNCL) BSI 2016
ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು.