Deuteronomy 28:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
Kannada BSI Bible 2016
ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.
Kannada Bible (KNCL) BSI 2016
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.