Deuteronomy 28:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.
Kannada BSI Bible 2016
ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.
Kannada Bible (KNCL) BSI 2016
“ನಿಮ್ಮ ಮೊಣಕಾಲುಗಳಲ್ಲೂ ತೊಡೆಗಳಲ್ಲೂ ಮತ್ತು ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಸರ್ವೇಶ್ವರ ಹುಟ್ಟಿಸಿ ಬಾಧಿಸುವರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು.