Deuteronomy 28:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.
Kannada BSI Bible 2016
ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದ್ರಾಕ್ಷಾವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವದರಿಂದ ನೀವು ಕೂಡಿಸಿಕೊಳ್ಳುವದಿಲ್ಲ, ಅವುಗಳ ರಸವನ್ನು ರುಚಿನೋಡುವದಿಲ್ಲ.
Kannada Bible (KNCL) BSI 2016
ದ್ರಾಕ್ಷಾವ್ಯವಸಾಯವನ್ನು ನೀವು ಎಷ್ಟುಮಾಡಿದರೂ ಅದರ ಹಣ್ಣುಗಳನ್ನು ಹುಳುಗಳೇ ತಿಂದುಹಾಕುವುವು; ನೀವು ಕೂಡಿಸಿಕೊಳ್ಳಲು ನಿಮಗೆ ಬಿಡವು. ಅವುಗಳ ರಸವನ್ನು ರುಚಿನೋಡಗೊಡಿಸವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಿತೋಟವನ್ನು ನೆಟ್ಟು ಕಾಪಾಡುವಿರಿ, ಆದರೆ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಮತ್ತು ಹಣ್ಣು ಕೂಡಿಸುವುದಿಲ್ಲ, ಏಕೆಂದರೆ ಹುಳುಗಳು ಅದನ್ನು ತಿಂದುಬಿಡುವುವು;