Deuteronomy 28:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
Kannada BSI Bible 2016
ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವದು.
Kannada Bible (KNCL) BSI 2016
ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಂತಾನಕ್ಕೂ ನಿಮ್ಮ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.