Deuteronomy 28:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.
Kannada BSI Bible 2016
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.
Kannada Bible (KNCL) BSI 2016
“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು.