Deuteronomy 28:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
Kannada BSI Bible 2016
ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ದನಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
Kannada Bible (KNCL) BSI 2016
ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.