Deuteronomy 28:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
Kannada BSI Bible 2016
ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು.