Deuteronomy 28:55 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನಿಗೆ ಊಟಕ್ಕೇನೂ ಇಲ್ಲದಿರುವುದರಿಂದ ಸ್ವಂತ ಮಕ್ಕಳನ್ನೇ ತಿನ್ನುವನು. ಅವರನ್ನು ಇತರರೊಂದಿಗೆ ಹಂಚಿಕೊಳ್ಳದೆ, ತನ್ನ ಸ್ವಂತ ಕುಟುಂಬದವರೊಂದಿಗೆ ಹಂಚಿಕೊಳ್ಳದೆ ತಾನೊಬ್ಬನೇ ತಿನ್ನುವನು. ನಿಮ್ಮ ವೈರಿಗಳು ಬಂದು ನಿಮ್ಮ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ನಿಮಗೆ ಇವೆಲ್ಲಾ ಸಂಭವಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.
Kannada BSI Bible 2016
ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ಅವನು ತನಗೆ ತಿನ್ನಲಿಕ್ಕೆ ಏನೂ ಸಿಗುವುದಿಲ್ಲ ಅಂದುಕೊಂಡು, ತನ್ನ ಮಕ್ಕಳ ಮಾಂಸವನ್ನು ಇತರರಿಗೆ ಕೊಡದೆ ತಿನ್ನುವನು.