Deuteronomy 28:57 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಆ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಈ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.
Kannada BSI Bible 2016
ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಕೊರತೆಯಲ್ಲಿಯೂ, ಮುತ್ತಿಗೆಯಲ್ಲಿಯೂ, ಶತ್ರು ನಿಮಗೆ ನಿಮ್ಮ ಪಟ್ಟಣಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ, ತನ್ನ ಮಕ್ಕಳನ್ನು ಗುಪ್ತವಾಗಿ ತಿಂದುಬಿಡುವಳು.