Deuteronomy 28:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,
Kannada BSI Bible 2016
ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ
Kannada Bible (KNCL) BSI 2016
“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರೆಂಬ ಈ ಘನವುಳ್ಳ ಹೆಸರಿಗೆ ನೀವು ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನಿಯಮದ ಮಾತುಗಳನ್ನು ಅಲಕ್ಷಿಸಿ, ತಪ್ಪು ದಾರಿ ಹಿಡಿದರೆ,