Deuteronomy 28:63 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
Kannada BSI Bible 2016
ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
Kannada Bible (KNCL) BSI 2016
ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.