Deuteronomy 28:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.
Kannada BSI Bible 2016
ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.
Kannada Bible (KNCL) BSI 2016
“ನಿಮ್ಮ ಮೇಲೆ ಎರಗುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಸರ್ವೇಶ್ವರ ಮಾಡುವರು; ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು.