Deuteronomy 28:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.
Kannada BSI Bible 2016
ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.
Kannada Bible (KNCL) BSI 2016
“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.