Deuteronomy 28:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಯನ್ನಾಗಿ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
Kannada BSI Bible 2016
ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
Kannada Bible (KNCL) BSI 2016
“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು.