Deuteronomy 29:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.
Kannada BSI Bible 2016
ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ: