Deuteronomy 29:13 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಜನರನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.
Kannada BSI Bible 2016
ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಒಡಂಬಡಿಕೆ ಯಾವುದೆಂದರೆ, ದೇವರು ನಿಮಗೆ ಹೇಳಿದಂತೆಯೂ, ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದಂತೆಯೂ, ಈ ಹೊತ್ತು ನಿಮ್ಮನ್ನು ತಮ್ಮ ಜನರನ್ನಾಗಿ ಸ್ಥಾಪಿಸಿ, ನಿಮಗೆ ದೇವರಾಗಬೇಕೆಂಬುದೇ.