Deuteronomy 29:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
Kannada BSI Bible 2016
ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.
Kannada Bible (KNCL) BSI 2016
“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.