Deuteronomy 29:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ. (Verses 20-21)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
Kannada BSI Bible 2016
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.
Kannada Bible (KNCL) BSI 2016
ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.