Deuteronomy 29:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿ ಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
Kannada BSI Bible 2016
ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
Kannada Bible (KNCL) BSI 2016
“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು.