Deuteronomy 29:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
Kannada BSI Bible 2016
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ
Kannada Bible (KNCL) BSI 2016
ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.