Deuteronomy 29:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
Kannada BSI Bible 2016
ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.
Kannada Bible (KNCL) BSI 2016
ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”