Deuteronomy 29:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.
Kannada BSI Bible 2016
ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.
Kannada Bible (KNCL) BSI 2016
ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!