Deuteronomy 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)
Kannada BSI Bible 2016
ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು.)
Kannada Bible (KNCL) BSI 2016
(ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.