Deuteronomy 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತಜನರನ್ನೂ ದೇಶವನ್ನೂ ನಿನ್ನ ಕೈವಶ ಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.