Deuteronomy 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.
Kannada BSI Bible 2016
ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು.
Kannada Bible (KNCL) BSI 2016
ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”