Deuteronomy 3:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.
Kannada BSI Bible 2016
ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ನಾನು ಯೆಹೋಶುವನಿಗೆ - ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ಹೊಳೇ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.
Kannada Bible (KNCL) BSI 2016
“ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.