Deuteronomy 3:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಜೋರ್ಡನ್ ನದಿ ದಾಟಿ, ನೀನು ನಮಗೆ ಕೊಡುವ ಉತ್ತಮವಾದ ದೇಶವನ್ನು ನಾನು ನೋಡುವಂತೆ ಮಾಡು. ಅದರ ಮನೋಹರವಾದ ಬೆಟ್ಟಪ್ರದೇಶಗಳನ್ನೂ ಲೆಬನೋನ್ ಪ್ರಾಂತ್ಯಗಳನ್ನೂ ನೋಡುವಂತೆ ಮಾಡು” ಎಂದು ಬೇಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.
Kannada BSI Bible 2016
ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನೇ, ನಾನೂ ಈ ಹೊಳೆಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ ಲೆಬನೋನ್ ಪರ್ವತವನ್ನೂ ನೋಡುವದಕ್ಕೆ ಅಪ್ಪಣೆಯಾಗಲಿ ಎಂದು ಬಿನ್ನೈಸಿದೆನು.
Kannada Bible (KNCL) BSI 2016
ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.