Deuteronomy 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಓಗನಿಗೆ ಸೇರಿದ್ದ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡೆವು. ಬಾಷಾನಿನಲ್ಲಿ ಓಗನ ರಾಜ್ಯದಲ್ಲಿರುವ ಅರ್ಗೋಬ್ ಪ್ರದೇಶದಲ್ಲಿ ಅರವತ್ತು ಪಟ್ಟಣಗಳು ನಮ್ಮ ವಶವಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
Kannada BSI Bible 2016
ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
Kannada Bible (KNCL) BSI 2016
ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.