Deuteronomy 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
Kannada BSI Bible 2016
ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
Kannada Bible (KNCL) BSI 2016
ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು.