Deuteronomy 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.
Kannada BSI Bible 2016
ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ನಾವು ಅರ್ನೋನ್ ಹೊಳೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಯೊರ್ದನ್ ಹೊಳೆಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.
Kannada Bible (KNCL) BSI 2016
“ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಜೋರ್ಡನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ನಾವು ಯೊರ್ದನ್ ನದಿಯ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರಸರ ಕೈಯಿಂದ ಸ್ವಾಧೀನಮಾಡಿಕೊಂಡೆವು.