Deuteronomy 30:10 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
Kannada BSI Bible 2016
ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.