Deuteronomy 30:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಆಜ್ಞೆಯು ಆಕಾಶದೊಳಗೆ ಇಲ್ಲ, ‘ನಮಗೋಸ್ಕರ ಮೇಲಿನ ಲೋಕವನ್ನೇರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಯಪಡಿಸುವವನು ಯಾರು? ನಾವು ಅದನ್ನು ಕೇಳಿ ಅದರಂತೆಯೇ ಮಾಡುತ್ತಿದ್ದೆವು’ ಎಂದು ವಿಚಾರಿಸುವ ಅವಶ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
Kannada BSI Bible 2016
ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಮೇಲಣ ಲೋಕದಲ್ಲಿರುವ ಮಾತಲ್ಲ. ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು ಅಂದುಕೊಳ್ಳುವದಕ್ಕೆ ಅವಕಾಶವೇನೂ ಇಲ್ಲ.
Kannada Bible (KNCL) BSI 2016
ಇದು ಮೇಲಣ ಲೋಕದಲ್ಲಿರುವ ಮಾತಲ್ಲ, ‘ನಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ.