Deuteronomy 30:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
Kannada BSI Bible 2016
ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು ಅಂದುಕೊಳ್ಳುವದಕ್ಕೆ ಆಸ್ಪದವೇನೂ ಇಲ್ಲ.
Kannada Bible (KNCL) BSI 2016
ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.