Deuteronomy 30:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
Kannada BSI Bible 2016
ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
Kannada Bible (KNCL) BSI 2016
ಇತರ ದೇವರುಗಳನ್ನು ಪೂಜಿಸಿ ಅವಲಂಭಿಸಿದರೆ ನೀವು ಸ್ವಾಧೀನಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.