Deuteronomy 30:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
Kannada BSI Bible 2016
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;
Kannada Bible (KNCL) BSI 2016
ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.