Deuteronomy 31:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
Kannada BSI Bible 2016
ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
Kannada Bible (KNCL) BSI 2016
ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರನ್ನು ಅಂದರೆ, ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಪರದೇಶಿಯರನ್ನೂ ಕೂಡಿಸಬೇಕು. ಅವರು ಕೇಳಿ ಕಲಿತು, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಈ ನಿಯಮದ ವಾಕ್ಯಗಳನ್ನೆಲ್ಲಾ ಕೈಗೊಂಡು ನಡೆಯುವ ಹಾಗೆ, ಅವರೆಲ್ಲರನ್ನು ಒಂದು ಕಡೆ ಕೂಡಿಸಬೇಕು.