Deuteronomy 31:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
Kannada BSI Bible 2016
ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.